pepperbuds.com@gmail.com
+91 94482 44695
+91 97312 56246
Reservations Call @
Jeera benefits ಜೀರಿಗೆ ಪ್ರಯೋಜನಗಳು

Benefits of Jeera scroll down for english edition ಜೀರಿಗೆ ಪ್ರಯೋಜನಗಳು

 
ಜೀರಿಗೆ ಕಷಾಯಕ್ಕೆ ಹಾಲು, ಜೇನುತುಪ್ಪು ಸೇರಿಸಿ ಪ್ರತಿದಿನ ಸೇವಿಸಿದರೆ ಎದೆಹಾಲು ಅಧಿಕವಾಗುವುದು.
ಮಜ್ಜಿಗೆಗೆ ಜೀರಿಗೆ ಪುಡಿ ಮತ್ತು ಉಪ್ಪು ಹಾಕಿ ಕಲಸಿ ಕುಡಿದರೆ ಪಿತ್ತ ಶಮನವಾಗುತ್ತದೆ.
ಎರಡು ಚಮಚ ಹುರಿದ ಜೀರಿಗೆಯನ್ನು ಒಂದು ದೊಡ್ಡ ಲೋಟ ನೀರು ಹಾಕಿ ಕುದಿಸಿ, ಅರ್ಧ ಲೋಟಕ್ಕೆ ಇಳಿಸಿ ಅದಕ್ಕೆ ಉಪ್ಪು - ತುಪ್ಪ ಬೆರೆಸಿ ಸೇವಿಸಿದರೆ, ಹೊಟ್ಟೆ ಉಬ್ಬರ, ನೋವು ಗುಣವಾಗುತ್ತದೆ.
ಜೀರ್ಣ ಶಕ್ತಿಯನ್ನು ಹೆಚ್ಚಿಸುವ ಜೀರಿಗೆ ಆ್ಯಸಿಡಿಟಿಯನ್ನೂ ದೂರ ಓಡಿಸುತ್ತದೆ. ಬಾಣಂತಿಯರು ಸೇವಿಸಿದರೆ ಎದೆಹಾಲು ಹೆಚ್ಚಿಸುತ್ತದೆ. ಮಗುವಿಗೆ ಹೊಟ್ಟೆನೋವು ಸಹ ಆಗುವುದಿಲ್ಲ. ಉದರ ಸಂಬಂಧೀ ಸಮಸ್ಯೆಗಳಿಗೆ ಜೀರಿಗೆ ರಾಮಬಾಣವೆಂದೇ ಹೇಳಬಹುದು.
ಜೀರಿಗೆಯನ್ನು ನುಣ್ಣಗೆ ಪುಡಿ ಮಾಡಿ ತೆಂಗಿನ ಕಾಯಿ ಹಾಲಿನಲ್ಲಿ ಬೆರೆಸಿ ಮೈಗೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ಉಗುರು ಬಿಸಿ ನೀರಿನಿಂದ ಸ್ನಾನ ಮಾಡಿದರೆ ಬೆವರು ಗುಳ್ಳೆ ಬರುವುದರಿಲ್ಲ
ಅಜೀರ್ಣದಿಂದ ಭೇದಿಯಾಗುತ್ತಿದ್ದರೆ ಹುರಿದ ಅಕ್ಕಿ-ತರಿಗೆ ಜೀರಿಗೆ ಪುಡಿ ಹಾಗೂ ಸಕ್ಕರೆ ಅಥವಾ ಉಪ್ಪು ಹಾಕಿ ಗಂಜಿ ತಯಾರಿಸಿ ಸೇವಿಸಿದರೆ ಅಜೀರ್ಣ ನಿವಾರಣೆಯಾಗುತ್ತದೆ.
ಜೀರಿಗೆಯನ್ನು ಬಾಯಿಯಲ್ಲಿ ಹಾಕಿಕೊಂಡು ಚೆನ್ನಾಗಿ ಅಗಿದು ತಿನ್ನುವುದರಿಂದ ಹಲ್ಲು ನೋವು ಕಡಿಮೆಯಾಗುತ್ತದೆ.
ಜೀರಿಗೆ ಪುಡಿಯನ್ನು ಮಜ್ಜಿಗೆ ಹಾಗೂ ಸ್ವಲ್ಪ ಉಪ್ಪು ಬೆರೆಸಿ ಕುಡಿದರೆ ಜೀರ್ಣಶಕ್ತಿ ಹೆಚ್ಚಿಸುತ್ತದೆ.
ಹೊಟ್ಟೆ ನೋವು, ವಾಂತಿ ಇದ್ದಾಗ  ಒಂದು ಚಮಚ ಜೀರಿಗೆ , ಒಂದು ಚಮಚ ಏಲಕ್ಕಿ ಪುಡಿಯನ್ನು ಒಂದು ಲೋಟ ನೀರಿನಲ್ಲಿ ಕುದಿಸಿ ಅರ್ಧ ಲೋಟಕ್ಕೆ ಇಳಿಸಬೇಕು. ತಣ್ಣಗಾದ ನಂತರ ಅದಕ್ಕೆ ಸಕ್ಕರೆ , ನಿಂಬೆ ಪಾನಕ ಬೆರೆಸಿ ದಿನಕ್ಕೆ ಮೂರು ಸಲ ಸೇವಿಸಿದರೆ ಹೊಟ್ಟೆ ತೊಳೆಸುವುದು ಮತ್ತು ವಾಂತಿ ನಿಲ್ಲುತ್ತದೆ.
ನೆನೆಸಿದ ಮೆಂತ್ಯದ ಬೀಜ, ಜೀರಿಗೆ , ಉಪ್ಪು ಹಾಗೂ ಖಾರ ಹಾಕಿ ಚಟ್ನಿ ತಯಾರಿಸಿ ಚಪಾತಿ ಜೊತೆ ಸೇವಿಸಿ. ನಂತರ ಹಾಲನ್ನು ಕುಡಿದರೆ ಒಂದು ವಾರದಲ್ಲಿ ಎದೆ ಹಾಲು ಹೆಚ್ಚಾಗುತ್ತದೆ .* ಜೀರಿಗೆ, ಸಕ್ಕರೆ, ಒಣಶುಂಠಿ ಮತ್ತು ಅಡಿಗೆ ಉಪ್ಪು ಇವುಗಳನ್ನು ಒಂದೊಂದು ಟೀ ಚಮಚದಷ್ಟು ತೆಗೆದುಕೊಂಡು ನುಣ್ಣಗೆ ಪುಡಿ ಮಾಡಿ ಒಂದು ಲೋಟ ಬಿಸಿ ನೀರಿಗೆ ಹಾಕಿ ಒಂದು ಹೋಳು ನಿಂಬೆಹಣ್ಣಿನ ರಸವನ್ನು ಅದಕ್ಕೆ ಹಿಂಡಿ ಕುಡಿಯುವುದರಿಂದ ಉದರ ಸಂಬಂಧ ರೋಗಗಳು ಗುಣವಾಗವುದು
ಜೀರಿಗೆ ಹಾಗೂ ಕೊತ್ತಂಬರಿ ಬೀಜವನ್ನು ಹುರಿದು ಪುಡಿ ಮಾಡಿ ಸಕ್ಕರೆ ಮತ್ತು ನೀರು ಸೇರಿಸಿ ಕುಡಿದರೆ ಬಾಯಾರಿಕೆ ನಿವಾರಣೆಯಾಗುತ್ತದೆ .
ಒಂದು ಲೋಟ ನೀರಿಗೆ ಜಜ್ಜಿದ ಶುಂಠಿ ಮತ್ತು ಕುಟ್ಟಿದ ಜೀರಿಗೆ ಹಾಕಿ ಕುದಿಸಿ, ಸೋಸಿ, ನಿಂಬೆರಸ ಮತ್ತು ಜೇನುತುಪ್ಪವನ್ನು ಬೆರೆಸಿ. ಬೇಕಿದ್ದರೆ ಕಾಳು ಮೆಣಸಿನ ಪುಡಿ ಸೇರಿಸಿ. ಸೇವಿಸಿ. ಇದರಿಂದ ಬೇಸಿಗೆಯ ಸಮಸ್ಯೆಗಳನ್ನು ನಿವಾರಿಸಬಹುದು.
ಜೀರಿಗೆಯ ಔಷಧ
ಜೀರಿಗೆಯ ಜೊತೆ ಇನ್ನಷ್ಟು ಪದಾರ್ಥಗಳನ್ನು ಸೇರಿಸಿ ಔಷಧ ತಯಾರಿಸಿಕೊಳ್ಳುವ ಬಗ್ಗೆ ಇಲ್ಲಿದೆ ಮಾಹಿತಿ:
ಅರ್ಧ ಚಮಚ ಜೀರಿಗೆಯನ್ನು ಒಂದು ಲೀಟರ್ ನೀರಿನಲ್ಲಿ ಹಾಕಿ ಚೆನ್ನಾಗಿ ಕುದಿಸಿ ಆರಿಸಿ. ಪ್ರತಿನಿತ್ಯ ಕುಡಿಯುವುದರಿಂದ ರಕ್ತ ಶುದ್ಧಿಯಾಗುತ್ತದೆ. 15 ರಿಂದ 20 ದಿನದವರೆಗೆ ಸೇವಿಸುವುದರಿಂದ ಚರ್ಮರೋಗ ಕಡಿಮೆಯಾಗುತ್ತದೆ. ಅರ್ಧ  ಲೋಟ ನೀರಿಗೆ ಅರ್ಧ ಚಮಚ ಜೀರಿಗೆ ಹಾಕಿ, ಕುದಿಸಿ ಶೋಧಿಸಿ ಹಾಲು ಬೆರೆಸಿ ಕಷಾಯ ತಯಾರಿಸಿ ಕುಡಿದರೆ ಆರೋಗ್ಯ ಸುಧಾರಿಸುತ್ತದೆ. ಜೀರಿಗೆ ನೀರು ಮತ್ತು ಜೀರಿಗೆ ಕಷಾಯ ರಕ್ತದ ಒತ್ತಡವನ್ನು ಸರಿ ಪಡಿಸುತ್ತದೆ. ಪಿತ್ತ ಮತ್ತು ಅಜೀರ್ಣದಿಂದ ಆಗುವ ತೊಂದರೆಗಳನ್ನು ಸರಿ ಪಡಿಸುತ್ತದೆ.
ಒಂದು ಬೊಗಸೆ ಹುರಿದ ಮೆಂತ್ಯ, ಹುರಿದ ಜೀರಿಗೆಗೆ ಒಂದು ಚಮಚ ಹುರಿದ ಕಾಳು ಮೆಣಸು ಸೇರಿಸಿ ಪುಡಿಮಾಡಿ. ಇದನ್ನು ನೀರಿನೊಂದಿಗೆ ನಿತ್ಯ ಸೇವಿಸಿದರೆ ಸಂಧಿವಾತ ಕಡಿಮೆಯಾಗುತ್ತದೆ.
ಒಂದು ಚಮಚ ಜೀರಿಗೆ ಮತ್ತು ಮೆಂತ್ಯ ರಾತ್ರಿ ನೆನೆಸಿಡಿ. ಬೆಳಗ್ಗೆ ಒಂದು ಹಿಡಿ ಮೆಂತ್ಯದ ಸೊಪ್ಪು ಮತ್ತು ತೆಂಗಿನ ಕಾಯಿ ಹಾಲಿನ ಜೊತೆಗೆ ಇದನ್ನೂ ಸೇರಿಸಿ ಮಿಕ್ಸಿಗೆ ಹಾಕಿ ನುಣ್ಣಗೆ ರುಬ್ಬಿ ಪೇಸ್್ಟ ತಯಾರಿಸಿ. ಈ ಪೇಸ್ಟನ್ನು ತಲೆಗೆ ಹಚ್ಚಿಕೊಂಡು ಸ್ವಲ್ಪ ಸಮಯದ ನಂತರ ಸ್ನಾನ ಮಾಡುವುದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ. ಕೂದಲಿಗೆ ಹೊಳಪು ಬರುತ್ತದೆ. ತಲೆಹೊಟ್ಟು ಮಾಯವಾಗುತ್ತದೆ.
 
Jeera benefits Zee benefits
Benefits of Jeera
 
 
Adding milk and honey to lemon juice adds to the daily intake of breast milk.
If the buttermilk is cooked with cumin seeds and salt, the bile will relieve it.
Boil two tablespoons roasted cumin with a large glass of water and bring it to half a cup and mix it with salt and ghee and stomach aches and pain.
The digestive tract increases the acidity of the digestive tract. When breastfeeding is consumed, breastfeeding increases. The baby does not even have a stomach. Gumorrhea can be said to be related to gastric problems.
Mix the coconut finely and mix it with coconut nut milk and apply it on the nail hot water after half an hour.
If you are diarrhea with indigestion you will be able to prepare a soybean or salted hammer with roasted rice and bring it to the digestive tract.
Tooth pain is reduced by eating gum in the mouth and eating well.
Adding curd to buttermilk and a little salt can help digestive energies.
Stomach Pain, Vomiting One spoon of cumin, one tablespoon of cardamom powder should be boiled in a glass of water and sliced ​​into half a cup. After cooling, add the sugar and lemon juice three times a day to the stomach and vomit.
Prepare the fenugreek seed, cumin seeds, salt and spinach chutney and eat with chapati. Take a few teaspoons of spinach, finely powder and put it in a glass of hot water, drinking a sliced ​​lemon juice and then treating it with a stomach ailments.
Grind the coconut and coriander seeds into powder and add sugar and water to the thirst.
Mix a glass of ginger and ginger into a glass of water, add lemon, lemon juice and honey. Add chopped pepper powder if desired. Eat. This can eliminate summer problems.
Ginger medicine
Adding more ingredients together with cumin is about making a drug:
Add half a spoon of cumin in one liter of water and cook well. Regular drinking can be cleansed by blood. Consumption of doses of 15 to 20 days reduces skin disease. Half a tablespoon of semolina is cooked and cooked, mixed with milk and cooked and drunk, improves health. Stomach water and lemon juice fix the blood pressure. Adjusts the problems with pimples and indigestion.
Add a spoon of roasted fenugreek seeds to a roasted roasted cumin. If it is consumed regularly with water, arthritis will be reduced.
Soak a spoon of cumin and fenugreek nights. Add one of the fenugreek leaves and coconut milk in the morning and mix it to the mixer and make a fine paste. Washing this paste into the head and bathing shortly afterwards reduces hair loss. The hair comes bright. The dandruff disappears.
Gallery

Pepper Buds
Home About Us Rooms & Tariff Facilities FAQs Gallery Contact Us
Gallery
Connect with us

Contact Us

PEPPER BUDS HOME STAY, HOMESTAY IN CHIKMAGALUR,

WhatsApp Number  +91 8310080532

CALL Us @ +91 9448244695 / +91 9731256246 

pepperbuds.com@gmail.com

BALUR VIA KOTTEGAHARA (KOTTIGEHARA)

NEAR BANKAL MUDIGERE TALUK 
CHICKMAGALUR DISTICT 577122
KARNATAKA
SOUTH INDIA 577101

Copyright @ .  Reproduction is forbidden unless authorized. All rights reserved.